ಕೋಲಾರ: ಮುಂದಿನ ವಾಸವಿ ಜಯಂತಿಯೊಳಗೆ ಜಿಲ್ಲಾಡಳಿತದಿಂದ ಜಾಗವನ್ನು ಗುರುತಿಸಿ ವಾಸವಿ ಸಮುದಾಯದ ಬಂಧುಗಳಿಗೆ ಅನುಕೂಲವಾಗುವಂತೆ ಭವನವನ್ನು ನಿರ್ಮಿಸಲು ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಭರವಸೆ ನೀಡಿದರು.
ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ಹಾಗೂ ವಾಸವಿ ಯುವಜನ ಸಂಘದಿಂದ ನಡೆದ ವಾಸವಿ ಜಯಂತಿ, ಶ್ರೀನಿವಾಸ ಕಲ್ಯಾಣೋತ್ಸವ, ಹಾಗೂ ಪುಷ್ಪ ಯಾಗಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಗರದ ಹೃದಯ ಭಾಗದಲ್ಲಿ ಇರುವ ವಾಸವಿ ಮಾತೆಯು ಎಲ್ಲರಿಗೂ ಒಳ್ಳೆಯದು ಮಾಡಲಿ, ಮನುಷ್ಯ ಯಾರಿಗೂ ಕೆಡುಕನ್ನು ಬಯಸದೆ ನ್ಯಾಯ, ನೀತಿ, ಧರ್ಮದಿಂದ ಕೈಲಾದ ಸಹಾಯವನ್ನು ಮಾಡುವಂತಹ ಶಕ್ತಿಯನ್ನು ದೇವರು ಎಲ್ಲರಿಗೂ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದು ತಿಳಿಸಿದರು
ಜಿಲ್ಲೆಯಲ್ಲಿ ಸಾಕಷ್ಟು ಜನರು ರಾಜಕೀಯವನ್ನು ಪ್ರವೇಶ ಮಾಡಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರಂತೆಯೇ ನಾನು ಕೆಲಸ ಮಾಡಲು ಬಂದಿದ್ದೇನೆ. ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ವಿಚಾರಕ್ಕೆ ಅನುದಾನ ಕೊರತೆಯಿಲ್ಲ. ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ವಾಸವಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಅಗತ್ಯ ನೆರವಿನ ಜೊತೆಗೆ ನಿಮ್ಮ ಜೊತೆಯಲ್ಲಿ ನಾನು ಇದ್ದು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜನರ ಸೇವೆ ಮಾಡಲು ಎಲ್ಲರಿಗೂ ಅವಕಾಶವನ್ನು ನೀಡುವುದಿಲ್ಲ. ಆದರೆ, ನಿಮ್ಮಗಳ ಸೇವೆ ಮಾಡುವ ಅವಕಾಶವನ್ನು ನಮಗೆ ನೀಡಿದ್ದಾರೆ. ನಾವು ಅಭಿವೃದ್ಧಿಯ ಪರವಾಗಿ ಯಾವುದೇ ಮೋಸ ವಂಚನೆಯಿಲ್ಲದೇ ಭ್ರಷ್ಟಾಚಾರವಿಲ್ಲದ ರೀತಿಯಲ್ಲಿ ಸರಕಾರದ ಅನುದಾನವನ್ನು ಹಾಗೂ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲು ದೇವರು ಆಶೀರ್ವಾದ ಮಾಡಿದ್ದಾರೆ ಎಂದರು.
ರಾಜ್ಯದ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕೋಲಾರ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲು ಈಗಾಗಲೇ 200 ಕೋಟಿ ಅನುದಾನವನ್ನು ನೀಡಿದ್ದಾರೆ. ವಾಸವಿ ಸಮುದಾಯದ ಅಭಿವೃದ್ಧಿಗೆ ಮನವಿ ಕೊಟ್ಟಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡತ್ತೇವೆ. ನಿಮ್ಮೊಂದಿಗೆ ಕಾಂಗ್ರೆಸ್ ಸರಕಾರ ಮತ್ತು ಇನ್ನೂ ಉಳಿದ ಜನಪ್ರತಿನಿಧಿಗಳ ಸಹಕಾರವು ಖಂಡಿತವಾಗಿ ಇರುತ್ತದೆ ಎಂದರು
ಈ ಸಂದರ್ಭದಲ್ಲಿ ಅರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎನ್.ಸಿ ಸತೀಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾದ ಸತ್ಯನಾರಾಯಣಶೆಟ್ಟಿ, ಬದ್ರೀನಾಥ್, ಚಲಪತಿ, ರಾಘವೇಂದ್ರ ಬಾಲಾಜಿ, ವೆಂಕಟೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ.ಶಿವಕುಮಾರ್, ಚಿಂಟು ಮುಂತಾದವರು ಇದ್ದರು
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…