Categories: ಕೋಲಾರ

ವರ್ಷದೊಳಗೆ ವಾಸವಿ ಸಮುದಾಯ ಭವನ ನಿರ್ಮಾಣ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ಮುಂದಿನ ವಾಸವಿ ಜಯಂತಿಯೊಳಗೆ ಜಿಲ್ಲಾಡಳಿತದಿಂದ ಜಾಗವನ್ನು ಗುರುತಿಸಿ ವಾಸವಿ ಸಮುದಾಯದ ಬಂಧುಗಳಿಗೆ ಅನುಕೂಲವಾಗುವಂತೆ ಭವನವನ್ನು ನಿರ್ಮಿಸಲು ಸರಕಾರದಿಂದ ಹಾಗೂ ವೈಯಕ್ತಿಕವಾಗಿ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಭರವಸೆ ನೀಡಿದರು.

ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ಹಾಗೂ ವಾಸವಿ ಯುವಜನ ಸಂಘದಿಂದ ನಡೆದ ವಾಸವಿ ಜಯಂತಿ, ಶ್ರೀನಿವಾಸ ಕಲ್ಯಾಣೋತ್ಸವ, ಹಾಗೂ ಪುಷ್ಪ ಯಾಗಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದ ಹೃದಯ ಭಾಗದಲ್ಲಿ ಇರುವ ವಾಸವಿ ಮಾತೆಯು ಎಲ್ಲರಿಗೂ ಒಳ್ಳೆಯದು ಮಾಡಲಿ, ಮನುಷ್ಯ ಯಾರಿಗೂ ಕೆಡುಕನ್ನು ಬಯಸದೆ ನ್ಯಾಯ, ನೀತಿ, ಧರ್ಮದಿಂದ ಕೈಲಾದ ಸಹಾಯವನ್ನು ಮಾಡುವಂತಹ ಶಕ್ತಿಯನ್ನು ದೇವರು ಎಲ್ಲರಿಗೂ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದು ತಿಳಿಸಿದರು

ಜಿಲ್ಲೆಯಲ್ಲಿ ಸಾಕಷ್ಟು ಜನರು ರಾಜಕೀಯವನ್ನು ಪ್ರವೇಶ ಮಾಡಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರಂತೆಯೇ ನಾನು ಕೆಲಸ ಮಾಡಲು ಬಂದಿದ್ದೇನೆ. ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ವಿಚಾರಕ್ಕೆ ಅನುದಾನ ಕೊರತೆಯಿಲ್ಲ. ಸಮುದಾಯದ ಮಕ್ಕಳ ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ವಾಸವಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಅಗತ್ಯ ನೆರವಿನ ಜೊತೆಗೆ ನಿಮ್ಮ ಜೊತೆಯಲ್ಲಿ ನಾನು ಇದ್ದು ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜನರ ಸೇವೆ ಮಾಡಲು ಎಲ್ಲರಿಗೂ ಅವಕಾಶವನ್ನು ನೀಡುವುದಿಲ್ಲ. ಆದರೆ, ನಿಮ್ಮಗಳ ಸೇವೆ ಮಾಡುವ ಅವಕಾಶವನ್ನು ನಮಗೆ ನೀಡಿದ್ದಾರೆ. ನಾವು ಅಭಿವೃದ್ಧಿಯ ಪರವಾಗಿ ಯಾವುದೇ ಮೋಸ ವಂಚನೆಯಿಲ್ಲದೇ ಭ್ರಷ್ಟಾಚಾರವಿಲ್ಲದ ರೀತಿಯಲ್ಲಿ ಸರಕಾರದ ಅನುದಾನವನ್ನು ಹಾಗೂ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲು ದೇವರು ಆಶೀರ್ವಾದ ಮಾಡಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ‌ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕೋಲಾರ ನಗರವನ್ನು ಮಾದರಿ ನಗರವನ್ನಾಗಿ ರೂಪಿಸಲು ಈಗಾಗಲೇ 200 ಕೋಟಿ ಅನುದಾನವನ್ನು ನೀಡಿದ್ದಾರೆ. ವಾಸವಿ ಸಮುದಾಯದ ಅಭಿವೃದ್ಧಿಗೆ ಮನವಿ ಕೊಟ್ಟಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡತ್ತೇವೆ. ನಿಮ್ಮೊಂದಿಗೆ ಕಾಂಗ್ರೆಸ್ ಸರಕಾರ ಮತ್ತು ಇನ್ನೂ ಉಳಿದ ಜನಪ್ರತಿನಿಧಿಗಳ ಸಹಕಾರವು ಖಂಡಿತವಾಗಿ ಇರುತ್ತದೆ ಎಂದರು

ಈ ಸಂದರ್ಭದಲ್ಲಿ ಅರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎನ್.ಸಿ ಸತೀಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾದ ಸತ್ಯನಾರಾಯಣಶೆಟ್ಟಿ, ಬದ್ರೀನಾಥ್, ಚಲಪತಿ, ರಾಘವೇಂದ್ರ ಬಾಲಾಜಿ, ವೆಂಕಟೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮಲೇಷಿಯಾ ರಾಜಕುಮಾರ್, ವೈ.ಶಿವಕುಮಾರ್, ಚಿಂಟು ಮುಂತಾದವರು ಇದ್ದರು

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

9 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

14 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

17 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago