ಇತರೆ ಜಿಲ್ಲೆ, ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ವಸತಿ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ‘ಶ್ರಮಿಕ್ ನಿವಾಸ್’ ಯೋಜನೆ ಜಾರಿ ಮಾಡಿದ್ದು, ಈ ಯೋಜನೆಯಿಂದಾಗಿ ಶ್ರಮಿಕ ವರ್ಗವೂ ಸಹ ಗೌರವದ ಬದುಕು ಕಂಡುಕೊಳ್ಳಲು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರತಿಪಾದಿಸಿದರು.
ದೊಡ್ಡಬಳ್ಳಾಪುರದ ಓಬದೇನಹಳ್ಳಿಯಲ್ಲಿ ರಾಜ್ಯ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಮಹತ್ವಾಕಾಂಕ್ಷೆಯ “ಶ್ರಮಿಕ್ ನಿವಾಸ್” ಯೋಜನೆಯಡಿ ನಿರ್ಮಿಸಲಾಗಿರುವ ಬೃಹತ್ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
“ದೇಶವನ್ನು ರಕ್ಷಿಸುವ ಸೈನಿಕರು, ಹಸಿವು ನೀಗಿಸುವ ರೈತರು ಮತ್ತು ದೇಶ ಕಟ್ಟುವುದರಲ್ಲಿ ಮಹತ್ವದ ಪಾತ್ರವಹಿಸಿರುವ ಶ್ರಮಿಕ ವರ್ಗ ಸುಖಃ ನೆಮ್ಮದಿ ಶಾಂತಿಯಿಂದ ಇದ್ದರೆ ದೇಶದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಹೀಗಾಗಿ ರಾಜ್ಯ ಸರ್ಕಾರ ಶ್ರಮಿಕ ವರ್ಗಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ” ಎಂದರು.
ಕೈಗಾರಿಕಾ ಪ್ರದೇಶಗಳು ಸೇರಿದಂತೆ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ‘ಶ್ರಮಿಕ್ ನಿವಾಸ್’ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, 138.71 ಕೋಟಿ ವೆಚ್ಚದಲ್ಲಿ ಶಿವಮೊಗ್ಗ, ಕಲ್ಬುರ್ಗಿ, ದಾವಣಗೆರೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯೋಜನೆಯು ಪ್ರಗತಿಯ ಹಂತದಲ್ಲಿವೆ.
ಶ್ರಮಿಕ್ ನಿವಾಸ್ ಯೋಜನೆಯಡಿ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯಗಳು ನಿರ್ಮಾಣವಾಗುತ್ತಿದೆ. ಏಕ ವಸತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದ್ದು, ಏಕ ಹಾಸಿಗೆ ವ್ಯವಸ್ಥೆ ಮತ್ತು ದ್ವಿ-ಹಾಸಿಗೆ ವ್ಯವಸ್ಥೆ ಲಭಿಸಲಿದೆ. ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೆಂಕಟರಮರಯ್ಯ, ತಮ್ಮ ಕ್ಷೇತ್ರದ ಓಬದೇನಹಳ್ಳಿಯಲ್ಲಿ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಶ್ರಮಿಕ್ ನಿವಾಸ್ ಯೋಜನೆಯಡಿ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಗೊಳಿಸಿರುವುದು ತಮಗೆ ಸಂತಸ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರು ಪ್ರಸಾದ್ ಎಂ.ಪಿ, ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಶಿವಪುತ್ರ ಬಾಬುರಾವ್, ಕಲ್ಯಾಣ ಆಯುಕ್ತರಾದ ಟಿ. ಆಂಜನೇಯ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್, ಮಂಡಳಿ ಸದಸ್ಯರಾದ ವೆಂಕಟೇಶ್, ಶಿವಾನಿ ಶಾಂತರಾಮ್ ಸೇರಿದಂತೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…