ಇತರೆ ಜಿಲ್ಲೆ, ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ವಸತಿ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ‘ಶ್ರಮಿಕ್ ನಿವಾಸ್’ ಯೋಜನೆ ಜಾರಿ ಮಾಡಿದ್ದು, ಈ ಯೋಜನೆಯಿಂದಾಗಿ ಶ್ರಮಿಕ ವರ್ಗವೂ ಸಹ ಗೌರವದ ಬದುಕು ಕಂಡುಕೊಳ್ಳಲು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಪ್ರತಿಪಾದಿಸಿದರು.
ದೊಡ್ಡಬಳ್ಳಾಪುರದ ಓಬದೇನಹಳ್ಳಿಯಲ್ಲಿ ರಾಜ್ಯ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಮಹತ್ವಾಕಾಂಕ್ಷೆಯ “ಶ್ರಮಿಕ್ ನಿವಾಸ್” ಯೋಜನೆಯಡಿ ನಿರ್ಮಿಸಲಾಗಿರುವ ಬೃಹತ್ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
“ದೇಶವನ್ನು ರಕ್ಷಿಸುವ ಸೈನಿಕರು, ಹಸಿವು ನೀಗಿಸುವ ರೈತರು ಮತ್ತು ದೇಶ ಕಟ್ಟುವುದರಲ್ಲಿ ಮಹತ್ವದ ಪಾತ್ರವಹಿಸಿರುವ ಶ್ರಮಿಕ ವರ್ಗ ಸುಖಃ ನೆಮ್ಮದಿ ಶಾಂತಿಯಿಂದ ಇದ್ದರೆ ದೇಶದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಹೀಗಾಗಿ ರಾಜ್ಯ ಸರ್ಕಾರ ಶ್ರಮಿಕ ವರ್ಗಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ” ಎಂದರು.
ಕೈಗಾರಿಕಾ ಪ್ರದೇಶಗಳು ಸೇರಿದಂತೆ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ‘ಶ್ರಮಿಕ್ ನಿವಾಸ್’ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, 138.71 ಕೋಟಿ ವೆಚ್ಚದಲ್ಲಿ ಶಿವಮೊಗ್ಗ, ಕಲ್ಬುರ್ಗಿ, ದಾವಣಗೆರೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯೋಜನೆಯು ಪ್ರಗತಿಯ ಹಂತದಲ್ಲಿವೆ.
ಶ್ರಮಿಕ್ ನಿವಾಸ್ ಯೋಜನೆಯಡಿ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯಗಳು ನಿರ್ಮಾಣವಾಗುತ್ತಿದೆ. ಏಕ ವಸತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದ್ದು, ಏಕ ಹಾಸಿಗೆ ವ್ಯವಸ್ಥೆ ಮತ್ತು ದ್ವಿ-ಹಾಸಿಗೆ ವ್ಯವಸ್ಥೆ ಲಭಿಸಲಿದೆ. ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೆಂಕಟರಮರಯ್ಯ, ತಮ್ಮ ಕ್ಷೇತ್ರದ ಓಬದೇನಹಳ್ಳಿಯಲ್ಲಿ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಶ್ರಮಿಕ್ ನಿವಾಸ್ ಯೋಜನೆಯಡಿ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಗೊಳಿಸಿರುವುದು ತಮಗೆ ಸಂತಸ ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರು ಪ್ರಸಾದ್ ಎಂ.ಪಿ, ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಶಿವಪುತ್ರ ಬಾಬುರಾವ್, ಕಲ್ಯಾಣ ಆಯುಕ್ತರಾದ ಟಿ. ಆಂಜನೇಯ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್, ಮಂಡಳಿ ಸದಸ್ಯರಾದ ವೆಂಕಟೇಶ್, ಶಿವಾನಿ ಶಾಂತರಾಮ್ ಸೇರಿದಂತೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…