ವಸತಿಯಲ್ಲಿ ಶಾಲೆಯಲ್ಲಿ ಓದುತ್ತಿದ್ದ ಮಗಳನ್ನು ನೋಡಲು ಬರುತ್ತಿದ್ದ ಪೋಷಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನ್ನಪ್ಪಿದ್ದು, ತಾಯಿಗೆ ತೀವ್ರ ಗಾಯಗಳಾದ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿರುವ ಘಟನೆ ಗೌರಿಬಿದನೂರು ತಾಲೂಕಿನ ತಾಲೂಕಿನ ವಾಟದಹೊಸಹಳ್ಳಿ ಬಳಿಯ ತಿರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ವೆಂಕಟೇಶ್ ಮೃತಪಟ್ಟಿದ್ದು, ಅವರ ಪತ್ನಿ ಭಾರತಿ ಅವರಿಗೆ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದು ಭಾನುವಾರ ಶಾಲೆಗೆ ರಜೆ ಹಿನ್ನೆಲೆ ಬಾಗೇಪಲ್ಲಿಯಿಂದ ಗೌರಿಬಿದನೂರು ವಸತಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಗಳನ್ನು ನೋಡಲು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಇಂದು ಮಧ್ಯಾಹ್ನ 3:30ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.