ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು;
• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.
• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ.134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.
• ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.
• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
• ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…