Categories: ಬಳ್ಳಾರಿ

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ “ಗುರುಕುಲ ವಸತಿ ಶಾಲೆ”ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ.

ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ.

ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ.

ಇವರೆಲ್ಲರೂ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ.

ಆರೋಪಿತ ವಿದ್ಯಾರ್ಥಿ ಪರಾರಿಯಾಗಿದ್ದು, ಮೃತ ಬಾಲಕನ ಪೋಷಕರು ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ದಾಳಿ ನಡೆಸಿದ ವಿದ್ಯಾರ್ಥಿ ಮಾದಕ ವ್ಯಸನಕ್ಕೆ ದಾಸನಾಗಿದ್ದನಾ ಎಂಬ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

9 minutes ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

3 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

4 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

5 hours ago

ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…

7 hours ago

ವಾರ್ಷಿಕ ಭವಿಷ್ಯ……ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ……..

ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…

9 hours ago