ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ 10-02-2026 ರೊಳಗಾಗಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಕಚೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ‌ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!