ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕವನ್ನು 28-02-2026 ರವರೆಗೆ ವಿಸ್ತರಿಸಲಾಗಿದೆ.

ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ‌ಅಧಿಕಾರಿಗಳು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

21 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago