ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ 10-02-2026 ರೊಳಗಾಗಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಈ ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧಿಕ, ಸಿಖ್, ಪಾರ್ಸಿ) ಹಾಗೂ ಶೇ. 25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಸ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊಬೈಲ್ ಸಂಖ್ಯೆ- 9632249214/ 9538384846, ಪ್ರಾಂಶುಪಾಲರು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ- 8660971267/ 8317403213, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ ದೇವನಹಳ್ಳಿ ತಾ. ದೂರವಾಣಿ ಸಂಖ್ಯೆ-8861926851, 7676905779, 8310103980, 9845622337, 9986874875, 8904491033, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿ ನಂ. 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…