ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ನಿವಾಸಿ ರಾಘವೇಂದ್ರ ಅವರ ಪುತ್ರ ಗುರುಕಿರಣ್ (12) ಎಂದು ಗುರುತಿಸಲಾಗಿದೆ. ಆತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಶಾಲೆಯ ಶಿಕ್ಷಕರು ಇಂದು ಬೆಳಗ್ಗೆ ವಿದ್ಯಾರ್ಥಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೋಷಕರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಗುರುಕಿರಣ್ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಮಗನ ಸಾವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ವಿದ್ಯಾರ್ಥಿಯ ಸಾವಿಗೆ ಶಿಕ್ಷಕರ ಹಲ್ಲೆ ಹಾಗೂ ಶಾಲೆಯಲ್ಲಿ ನೀಡಲಾಗುತ್ತಿದ್ದ ಅತಿಯಾದ ಒತ್ತಡವೇ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಲೆ ಹಾಗೂ ಆಸ್ಪತ್ರೆ ಬಳಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿಯ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವೇ ತಿಳಿದುಬರಬೇಕಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…