ವಸುಧಾ ವಂದನ ಕಾರ್ಯಕ್ರಮದಡಿ ಪ್ರತೀ ಗ್ರಾ. ಪಂ ಗೆ 75 ವಿವಿಧ ಜಾತಿಯ ಸಸಿ ವಿತರಣೆ- ತಾ.ಪಂ‌ ಇಒ ಎನ್.ಮುನಿರಾಜು

77ನೇ‌ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಭಾಗವಾಗಿ ವಸುಧಾ ವಂದನ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿಗಳನ್ನು ನೆಡಲಾಗುತ್ತಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ತಿಳಿಸಿದರು.

ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಭಾಗವಾಗಿ ರಾಷ್ಟ್ರಧ್ವಜ ವಿತರಣೆ, ಪಂಚಪ್ರಾಣ ಪ್ರತಿಜ್ಞಾವಿಧಿ ಬೋಧನೆ, ಪ್ರತೀ ಗ್ರಾಮ ಪಂಚಾಯಿತಿಯಿಂದ ಮಣ್ಣು ಸಂಗ್ರಹಣೆ, ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ, ಅಮೃತ ಸರೋವರ ಅಂಗಳದಲ್ಲಿ ಧ್ವಜಾರೋಹಣ ಹಾಗೂ ವೀರ ಯೋಧರಿಗೆ ಗೌರವ ಸಲ್ಲಿಸುವುದಕ್ಕಾಗಿ ಶಿಲಾಫಲಕ ಅನಾವರಣ ಹೀಗೆ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಇಂದು ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ರಾಷ್ಟ್ರಧ್ವಜಗಳನ್ನು ವಿತರಿಸಲಾಯಿತು. ಸಾಮಾಜಿಕ ಅರಣ್ಯ ಇಲಾಖೆಯಿಂದ ಪ್ರತೀ ಗ್ರಾಮ ಪಂಚಾಯಿತಿಗೆ 75 ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗಿದ್ದು, ವಸುಧಾ ವಂದನ್ ಕಾರ್ಯಕ್ರಮದಡಿ ಸಸಿಗಳನ್ನು ನೆಡಲಾಯಿತು.

ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದ್ದು ಸ್ವಾತಂತ್ರ್ಯ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಆಯಾ ಗ್ರಾಮ ಪಂಚಾಯಿತಿಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಳೆಯ ಧ್ವಜಾರೋಹಣ ಹಾಗೂ ಶಿಲಾಫಲಕ ಅನಾವರಣಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 hour ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

3 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

12 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

16 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

19 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

20 hours ago