ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಯಡರಿ) ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಯಡರಿ) ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್‌ 12 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

2 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

2 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

3 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

4 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

5 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

15 hours ago