ಮುಂಬೈ: ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿನ ನಗೆ ಬೀರಲು ಯತ್ನಿಸಿದ ಮುಂಬೈಯನ್ನು ಸಂಘಟಿತ ಹೋರಾಟದ ಮೂಲಕ ಏಳು ವಿಕೆಟ್‌ಗಳ ಅಂತರದಲ್ಲಿ ಸೋಲಿಸಿ ಚೆನ್ನೈ ಸತತ ಎರಡನೇ ಜಯದ ನಗೆ ಬೀರಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ನಿರ್ಧಾರ ಸರಿಯಾಗಿಯೇ ಇತ್ತು, ಮೊದಲ ವಿಕೆಟ್ ನಷ್ಟಕ್ಕೆ ಆರಂಭಿಕ ಬ್ಯಾಟ್ಸ್‌ಮನ್ಗಳಾದ ನಾಯಕ ರೋಹಿತ್ ಶರ್ಮಾ (21) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (32) ಉತ್ತಮ ಆರಂಭ ನೀಡಿದರೂ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಕೆಮರೂನ್ ಗ್ರೀನ್ (12), ಸೂರ್ಯ ಕುಮಾರ್ ಯಾದವ್ (1) ಹೆಚ್ಚು ಹೊತ್ತು ನಿಲ್ಲಲಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ಗಳಾದ ತಿಲಕ್ ವಮಾ೯(22) ಹಾಗೂ ಟೀಮ್ ಡೇವಿಡ್ (31) ರನ್ ಗಳಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ಸಾಧಾರಣ 158 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಆರಂಭಿಕರಾಗಿ ಕಾನ್ವೆ ಜೊತೆಗೆ ಸ್ಥಳೀಯ ಪ್ರತಿಭೆ ಅಂಜಿಕ್ಯಾ ರಹಾನೆ ಇನ್ನಿಂಗ್ಸ್ ಆರಂಭಿಸಿದರು, ಆದರೆ ಕಾನ್ವೆ (0) ತಂಡದ ಮೊತ್ತ ಸೊನ್ನೆ ಆಗಿರುವಾಗಲೆ ಪೆವಿಲಿಯನ್ ಗೆ ತೆರಳಿದರು.
ನಂತರ ಜೊತೆಯಾದ ರುತುರಾಜ್ ಗಾಯಕ್ವಾಡ್ ಅಜೇಯ (40) ಹಾಗೂ ಅಂಜಿಕ್ಯಾ ರಹಾನೆ (61) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಶಿವಂ ದುಬೆ (28) ಹಾಗೂ ಅಂಬಾಟಿ ರಾಯಡು (20) ರನ್ ಗಳಿಸಿ ತಂಡಕ್ಕೆ ಗೆಲುವು ತಂದು ಕೊಟ್ಟರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…