ವಾಘ್ ಬಕ್ರಿ ಟೀ ಗ್ರೂಪ್ ನ ನಿರ್ದೇಶಕ ಪರಾಗ್ ದೇಸಾಯಿ ಮೇಲೆ ಬೀದಿನಾಯಿಗಳ ದಾಳಿ: ಚಿಕಿತ್ಸೆ ಫಲಿಸದೇ ಪರಾಗ್ ದೇಸಾಯಿ ಸಾವು

ವಾಘ್ ಬಕ್ರಿ ಟೀ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ (49) ಬೀದಿನಾಯಿಗಳ ದಾಳಿಗೆ ತುತ್ತಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವಾರ ಅಹಮದಾಬಾದ್‌ನಲ್ಲಿರುವ ತಮ್ಮ ನಿವಾಸದ ಬಳಿ ಬೀದಿ ನಾಯಿಗಳ ದಾಳಿಗೆ ಸಿಲುಕಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ದೇಸಾಯಿ ಮೆದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನಪ್ಪಿದ್ದಾರೆ ಎನ್ನಲಾಗಿದೆ.

“ನಮ್ಮ ಪ್ರೀತಿಯ ಪರಾಗ್ ದೇಸಾಯಿ ಅವರ ದುಃಖದ ನಿಧನವನ್ನು ತೀವ್ರ ದುಃಖದಿಂದ ತಿಳಿಸಲು ನಾವು ವಿಷಾದಿಸುತ್ತೇವೆ” ಎಂದು ಕಂಪನಿಯು ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ.

ಅದೇ ರೀತಿ ಪರಾಗ್ ದೇಸಾಯಿ ಅವರ ಸಾವಿಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಗುಜರಾತ್ ಕಾಂಗ್ರೆಸ್ ನಾಯಕ ಶಕ್ತಿ ಸಿನ್ ಗೋಹಿಲ್ , ‘ಇದು ತುಂಬ ದುಃಖದ ಸುದ್ದಿಯಾಗಿದೆ. ಮೆದುಳು ರಕ್ತಸ್ರಾವದಿಂದ ವಾಫ್‌ ಬಕ್ರಿ ಟೀ ಗ್ರೂಪ್‌ನ ಮಾಲೀಕ ಮತ್ತು ನಿರ್ದೇಶಕ ಪರಾಗ್ ದೇಸಾಯಿ ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

8 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

8 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

14 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

15 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago