ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ ಬೀಗ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬುಧವಾರ ನಗರದ ದೊಡ್ಡ ದೊಡ್ಡ ಹೋಟೆಲ್ ಗಳಲ್ಲಿ ಸಿಲಿಂಡರ್ ಗಳು ಇಲ್ಲದೆ ಸೌದೆ ಒಲೆ ಮೊರೆಹೋಗಿದ್ದರು. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೂ ಸಿಲಿಂಡರ್ ಭೀತಿ ಎದುರಾಗಿದ್ದು, ಸೌದೆಗಳ ಸಂಗ್ರಹಕ್ಕೆ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಇತ್ತ ಸರ್ಕಾರಿ ಶಾಲೆಗಳಲ್ಲೂ ಬಿಸಿಯೂಟಕ್ಕೂ ಸಮಸ್ಯೆ ಎದುರಾಗುವ ಆತಂಕ ಕಾಣುತ್ತಿದೆ.

ಪ್ರತಿನಿತ್ಯ 400-500 ಸಿಲಿಂಡರ್ ಗಳ ಬೇಡಿಕೆ

ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳು, ಟೀ, ಕಾಫಿ ಅಂಗಡಿಗಳು ಸೇರಿ ಪ್ರತಿ ನಿತ್ಯ ಅಂದಾಜು 400  ರಿಂದ 500 ಕ್ಕೂ ಹೆಚ್ಚು ವಾಣಿಜ್ಯ ಸಿಲಿಂಡರ್ ಬೇಡಿಕೆ ಇದೆ. ಈಗಾಗಲೇ ಕೆಲವು ಹೋಟೆಲ್‌ಗಳು ಸಿಲಿಂಡರ್ ಹೊಂದಿಸಲಾಗದೆ ಬಾಗಿಲು ಮುಚ್ಚುತ್ತಿದ್ದು, ಬುಧವಾರ ನಗರದ ಹಲವಾರು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಸೌದೆ ಒಲೆಯಲ್ಲಿ ಅಡುಗೆ ಮಾಡಿ, ಗ್ರಾಹಕರಿಗೆ ಊಟ ಒದಗಿಸುತ್ತಿದ್ದಾರೆ. ಕೆಲವು ಹೋಟೆಲ್ ಗಳಲ್ಲಿ ಈಗಾಗಲೇ ಹೊಂದಿರುವ ವಾಣಿಜ್ಯ ಸಿಲಿಂಡರ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಖಾಲಿಯಾದ ಬಳಿಕ ಬೀಗ ಹಾಕುವ ಪರಿಸ್ಥಿತಿ ಎದುರಾಗುವ ಆತಂಕ ಹೋಟೆಲ್ ಮಾಲೀಕರಿಗೆ ಎದುರಾಗಿದೆ.

ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು:

ನಗರದ ಪ್ರಮುಖ ಗ್ಯಾಸ್ ಏಜೆನ್ಸಿಯಾದ ಮಂಜುನಾಥ ಏಜೆನ್ಸಿಗೆ ಕಳೆದ ಒಂದು ವಾರದಿಂದ ವಾಣಿಜ್ಯ ಬಳಕೆ ಸಿಲಿಂಡರ್ ಗಳು ಬಂದಿಲ್ಲ. ಹೀಗಾಗಿ ಪ್ರತಿನಿತ್ಯ ಇಲ್ಲಿಂದ ಸರಬರಾಜು ಆಗುತ್ತಿದ್ದ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಹೋಟೆಲ್ ಮಾಲೀಕರುಗಳು ಕಂಗಾಲಾಗಿದ್ದಾರೆ. ಕನಿಷ್ಟ ನಿತ್ಯವೂ 150 ಸಿಲಿಂಡರ್ ಗಳು ಬೇಡಿಕೆ ಇದ್ದು ಪೂರೈಕೆ ಇಲ್ಲದೆ ಕೈಕಟ್ಟಿ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಘಾಟಿಯಲ್ಲಿ ಸೌದೆಗಳ ಸಂಗ್ರಹಕ್ಕೆ ಸಿದ್ಧತೆ:

ಕ್ಷೇತ್ರದ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಸಿಲಿಂಡರ್ ಗಳ ಅಭಾವ ಎದುರಾಗಿದೆ. ಈ ಕುರಿತು ಘಾಟಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಮಾಹಿತಿ ನೀಡಿದ್ದು, ಎಂದಿನಂತೆ ಸಿಲಿಂಡರ್ ಗಳ ಇಂಡೆಂಟ್ ಕಳಿಸಿದ್ದೇವೆ. ಆದರೆ ಪೂರೈಕೆಯಲ್ಲಿ ವ್ಯತ್ಯಯವಾದರೆ ಸೌದೆಗಳ ಮೂಲಕ ಬೆಳಗ್ಗಿನ ಮತ್ತು ಮಧ್ಯಾಹ್ನದ ಪ್ರಸಾದ ತಯಾರಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

5 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

7 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

9 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

21 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

21 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago