ವಾಮಾಚಾರಕ್ಕೆ 1 ವರ್ಷದ ಗಂಡು ಮಗುವೊಂದನ್ನು ಬಲಿ ಕೊಡಲು ಯತ್ನ ಆರೋಪ: ಮಗು ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಪಟ್ಟಣದಲ್ಲಿ ಶನಿವಾರ 1 ವರ್ಷದ ಗಂಡು ಮಗುವೊಂದನ್ನು ವಾಮಾಚಾರಕ್ಕೆ ಬಲಿಕೊಡಲು ಸಿದ್ಧತೆ ನಡೆಯುತ್ತಿತ್ತು ಎಂಬ ಅನುಮಾನದಡಿ ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಯ ಮೇಲೆ ದಾಳಿ ಮಾಡಿ ರಕ್ಷಣೆ ಮಾಡಿದ್ದಾರೆ.

ರಕ್ಷಣೆ ಮಾಡಿದ ಮಗುವನ್ನು ಶಿಶುಮಂದಿರದ ಆಸರೆಗೆ ಒಪ್ಪಿಸಲಾಗಿದ್ದು, ಸೋಮವಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಬರುವ ಆದೇಶದ ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯಲಿದೆ. ಶನಿವಾರ ಮುಂಜಾನೆ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕ ರೊಬ್ಬರು ಕರೆ ಮಾಡಿ ವಾಮಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆ ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಮ್ಮ, ಮಕ್ಕಳ ರಕ್ಷಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಅವರು ಪೊಲೀಸರ ಸಹಕಾರದೊಂದಿಗೆ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಮೂರಂತಸ್ತಿನ ಕಟ್ಟಡದಲ್ಲಿನ ತಳ ಮಹಡಿಯಲ್ಲಿ ಅಗೆದು ಗುಂಡಿ ತೋಡಿರುವ ದೃಶ್ಯ ಕಂಡು

ಬಂದಿದೆ. ಜತೆಗೆ ಅಲ್ಲಿ 1 ವರ್ಷದ ಗಂಡುಮಗುಪತ್ತೆಯಾಗಿದೆ. ನಿಧಿ ಆಸೆಗಾಗಿ ಮಗು ಬಲಿಯ ಯತ್ನ?:ಪೌರ್ಣಿಮೆ ದಿನವಾದ ಶನಿವಾರ ನಿಧಿ ಆಸೆಗಾಗಿ ಮಗು ಬಲಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯೊಂದರಲ್ಲಿ ಹುತ್ತವನ್ನು ಅಗೆದು ಪೂಜಾ ಸಾಮಗ್ರಿಗಳನ್ನು ಅಣಿಗೊಳಿಸಿರುವ ದೃಶ್ಯ ಕಂಡುಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಇಮ್ರಾನ್ ಹಾಗೂ ನಚ್ಚಾ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಈ ಮಗುವನ್ನು ಕೋಲಾರದ ದಂಪತಿಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಅನುಮಾನ!:ಮನೆಯಲ್ಲಿ ಹುತ್ತ ಬೆಳೆದು ಕೊಂಡಿತ್ತು. ಅದನ್ನು ತೆರವುಗೊಳಿಸಲು ಅಗೆದಿರುವುದಾಗಿ ಮನೆಯವರು ಒಂದು ಕಡೆ ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಗಂಡನಿಗೆ ಆರೋಗ್ಯ ಸರಿಯಿರಲಿಲ್ಲ. ಅವರಿಗೆ ಯಾರೋ ಮಾಟ ಮಾಡಿಸಿ ಇಲ್ಲಿ ಅಡಗಿಸಿಟ್ಟಿದ್ದಾರೆ ಎಂಬ ಕಾರಣಕ್ಕೆ ಆಗೆದಿದ್ದೇವೆ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಭಿನ್ನ ಹೇಳಿಕೆಗಳು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.

ಸಹಾಯವಾಣಿ ಕರೆ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು ಮಗುವನ್ನು ರಕ್ಷಣೆ ಮಾಡಿ ದೇವನಹಳ್ಳಿಯ ಶಿಶುಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಲ್ಯಾಣ ಸಮಿತಿ ಎದುರು ಮಗುವನ್ನು ಹಾಜರುಪಡಿಸಿ ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸೋಮವಾರ ಸಮಿತಿ ಆದೇಶ ಬರಲಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಲಿದ್ದು, ಮುಂದಿನ ತನಿಖೆ ನಡೆಯಲಿದೆ ಎಂದು ಅನಿತಾಲಕ್ಷ್ಮೀ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ, ಬೆಂ.ಗ್ರಾಮಾಂತರ ಹೇಳಿದರು.

ಮನೆಯ ತಳಮಹಡಿಯಲ್ಲಿ ದೊಡ್ಡದಾದ ಗುಂಡಿ ತೆಗೆಯಲಾಗಿದೆ. ವಿಚಾರಣೆ ವೇಳೆ ದಂಪತಿ ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಇವೆಲ್ಲವೂ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಲಾಗಿದೆ ಎಂದು ಶ್ರೀಧ‌ರ್, ಮಕ್ಕಳ ರಕ್ಷಣಾಧಿಕಾರಿ ಬೆಂ.ಗ್ರಾ ಹೇಳಿದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

4 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

6 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

9 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

21 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago