ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಭಾರತ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 02 ರವರೆಗೆ 4 ದಿನಗಳ ಕಾಲ ಜಿಲ್ಲೆಯ ಕೆಲವು ಭಾಗಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯು ವಿವಿಧ ಹಂತದಲ್ಲಿದ್ದು, ಮಳೆ ಗಾಳಿ ಸಂದರ್ಭದಲ್ಲಿ ನೆಲಕುರುಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿ ಇರುವ ಬೆಳೆಯನ್ನು ಸಣ್ಣ ಸಣ್ಣ ಕಟ್ಟುಗಳಾಗಿ / ಕುಚ್ಚುಗಳಾಗಿ ಕಟ್ಟಿ ಗಾಳಿಗೆ ಬೀಳದಂತೆ ಜಾಗ್ರತೆ ವಹಿಸುವುದು. ಕಟಾವಿಗೆ ಬಂದಿರುವ ರಾಗಿಯನ್ನು 4 ರಿಂದ 5 ದಿನ ಮುಂದೂಡಿ ಕಟಾವು ಮಾಡುವುದು. ಈಗಾಗಲೇ ಕಟಾವು ಮಾಡಿದ ರಾಗಿ ಜಮೀನಿನಲ್ಲಿ ಇಟ್ಟಿದ್ದರೆ ತೇವಾಂಶವಿಲ್ಲದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಶೀಲೀಂದ್ರ ಬೆಳೆದು ಹಾಳಾಗದಂತೆ ಶೇಖರಿಸಿ ಸಂರಕ್ಷಿಸುವುದು. ಜಮೀನಿನಲ್ಲಿ ನೀರು ನಿಲ್ಲದಂತೆ ಸಣ್ಣ ಸಣ್ಣ ಕಾಲುವೆಗಳಾಗಿ ಮಾಡಿ ನೀರು ಬಸಿದು ಹೋಗುವಂತೆ ನೋಡಿಕೊಂಡು ಬೆಳೆ ನಷ್ಟವಾಗದಂತೆ ಕಾಪಾಡಿಕೊಳ್ಳುವಂತೆ ಕೃಷಿ ಇಲಾಖಾ ವತಿಯಿಂದ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…