ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.
ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆ ಬೀಗ ಜಡಿಯುವಂತೆ ಮಂಡಳಿ ಆದೇಶ ಹೊರಡಿಸಿದೆ. ಇದರ ಜೊತೆಯಲ್ಲಿ ಫ್ಯಾಕ್ಟರಿಗೆ ನೀಡರೋ ವಿದ್ಯುತ್ ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.
ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ. ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈಧಿವೇಟ್ ಲಿಮಿಟೆಡ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…