
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ ಸಮಸ್ಯೆ ವಾರದೊಳಗೆ ಸಂಪೂರ್ಣ ನಿವಾರಣೆಯಾಗಲಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.
ಜನರು ಮನೆಗಳಲ್ಲಿ ಅಡುಗೆ ಅನಿಲ ಬಳಕೆಯಲ್ಲಿ ಮಿತಿವ್ಯಯ ಮಾಡುವಲ್ಲಿ ಸಹಕರಿಸಬೇಕು. ಗ್ಯಾಸ್ ಪೂರೈಕೆದಾರರು ಕಾಳಸಂತೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಬಾರದು. ಕಾಳ ಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
ಕೊಲ್ಲಿ ದೇಶಗಳ ಯುದ್ಧದ ಸಮಯದಲ್ಲಿ ಅನಗತ್ಯವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ ಗೊಂದಲ ಸೃಷ್ಟಿಸಿದ್ದಾರೆ. ವಾರದಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ ಎಂದರು.