ದೊಡ್ಡಬಳ್ಳಾಪುರ : ನಗರದ ಹಲವೆಡೆ ವಾರದ ಬಡ್ಡಿ ದಂಧೆ ನಡೆಯುತ್ತಿದ್ದು, ವಾರದ ಬಡ್ಡಿಗೆ ಸಾಲ ಪಡೆದಿದ್ದ ವ್ಯಕ್ತಿ ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನಗರದ ವಿನಾಯಕ ನಗರದ ಕಾರ್ಮೆಲ್ ಜ್ಯೋತಿ ಶಾಲೆ ಬಳಿ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ ₹7) ಬಡ್ಡಿಗೆ ಹಲವರ ಬಳಿ ಕೈ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಪರ್ವೇಜ್ ಆತ್ಮಹತ್ಯೆ ಕುರಿತು ಮಾತನಾಡಿದ ಕರುನಾಡಸೇನೆ ತಾಲ್ಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು, ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂದೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…