ವಾರದ ಬಡ್ಡಿಯ ಹಣ ನೀಡದಿದ್ದಕ್ಕೆ ವ್ಯಕ್ತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖನದಾಳ ಗ್ರಾಮದಲ್ಲಿ ನಡೆದಿದೆ.
ಬಡ್ಡಿ ನಾಗಪ್ಪ ಮಾಯಪ್ಪ ವಡ್ಡರ ಎಂಬಾತ ರೋಹಿತ ವಡ್ಡರ ಎಂಬುವವನ ಮೇಲೆ ಹಣದ ವಿಷಯಕ್ಕೆ ಮನ ಬಂದಂತೆ ಕಲ್ಲಿನಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ರೊಹೀತ ವಡ್ಡರ್ ಎಂಬಾತ ವಾರದ ಬಡ್ಡಿಗೆ ಎರಡು ಸಾವಿರ ಹಣವನ್ನು ಬಡ್ಡಿ ನಾಗಪ್ಪ ಮಾಯಪ್ಪ ವಡ್ಡರ ಬಳಿ ಪಡೆದಿದ್ದ.
ಎರಡು ಸಾವಿರ ಹಣಕ್ಕೆ ವಾರಕ್ಕೆ 500ರೂ. ಬಡ್ಡಿ ಕೊಡಬೇಕಿತ್ತು. ಒಂದು ವಾರ ಬಡ್ಡಿ ಹಣ ಕೊಡಲು ತಡವಾಗಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಕಲ್ಲಿನಿಂದ ತಲೆಗೆ ಬಲವಾಗಿ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿರುವ ವಿಡಿಯೋ ಮೊಬೈಲ್ ರೆಕಾರ್ಡ್ ಆಗಿದೆ.
ಸದ್ಯ ಹಲ್ಲೆಗೊಳಗಾದವನಿಗೆ ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ನಾಗಪ್ಪಾ ವಡ್ಡರ ವಿರುದ್ದ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…