ಕೋಲಾರ: ವಾರದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕೋಲಾರ ನಗರದ ಕೋಲಾರಮ್ಮ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನವೆಂಬರ್ -27 ರಂದು ಕೋಲಾರದ ಟಮಕ ಬಡಾವಣೆಯಿಂದ ಆಶಾ (25) ನಾಪತ್ತೆಯಾಗಿದ್ದರು. ನಾಪತ್ತೆ ಸಂಬಂಧ ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಕೌಟುಂಬಿಕ ಕಲಹ ಹಿನ್ನೆಲೆ ಮನೆಯಿಂದ ಮಹಿಳೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆವ್ಯಕ್ತವಾಗಿದೆ.
ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.