ದೇವನಹಳ್ಳಿ ತಾಲ್ಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಜಾಗ ಗುರ್ತಿಸಲಾಗಿದ್ದು ಜಾಗಕ್ಕೆ ಕಂಪೌಂಡ್ ನಿರ್ಮಾಸಲು ಶಾಸಕರ ನಿಧಿಯಿಂದ 10 ಲಕ್ಷ ರೂ. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ‘ಶ್ರೀ ಮಹರ್ಷಿ ವಾಲ್ಮೀಕಿ’ರವರ ಜಯಂತ್ಯೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಮಹರ್ಷಿ ವಾಲ್ಮೀಕಿ ರವರು ಮಹಾನ್ ವ್ಯಕ್ತಿ, ಕಾಲಜ್ಞಾನಿ. ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಬೇಕು. ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಸಾರ್ವಕಾಲಿಕ. ಪ್ರತಿಯೊಬ್ಬರೂ ವಾಲ್ಮೀಕಿಯವರ ಆದರ್ಶ ಜೀವನವನ್ನು ತಮ್ಮ ಬದುಕಿನಲ್ಲಿ ರೂಡಿಸಿಕೊಂಡು ನಡೆಯಬೇಕಿದೆ ಎಂದರು.
ನಾನು ಲೋಕಸಭಾ ಸದಸ್ಯನಾಗಿದ್ದಾಗ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ವಾಲ್ಮೀಕಿ ವಸತಿ ಶಾಲೆಗಳನ್ನು ಆರಂಭಿಸಿದೆ. ಇದರಿಂದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ. ಹೆಚ್ಚಿನ ಒತ್ತು ನೀಡುತ್ತಿದೆ. ವಾಲ್ಮೀಕಿ ವಸತಿ ಶಾಲೆಗಳು ಆರಂಭಿಸುವ ಮೂಲಕ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ವೋತೋಮುಖ ಅಭಿವೃದ್ಧಿ ಮಾಡುವ ಕನಸು ಕಂಡಿದ್ದೇವೆ. ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ಶಾಲೆ ಶೀಘ್ರದಲ್ಲೇ ಆರಂಭಿಸಲಾಗುವುದು. ದೇವನಹಳ್ಳಿ ತಾಲ್ಲೂಕಿನ ಗೋಕರೆ ಬಳಿಯ ವಾಲ್ಮೀಕಿ ಭವನದ ಬಾಕಿ ಉಳಿದಿರುವ ಕಾಮಗಾರಿಗೆ 1 ಕೋಟಿ ರೂಗಳ ಅನುದಾನ ಬೇಕಿದ್ದು, ತಕ್ಷಣ 50 ಲಕ್ಷ ರೂಗಳ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ವಿಜಯಪುರದಲ್ಲಿ ವಾಲ್ಮೀಕಿ ಬಾಲಕಿಯರ ವಸತಿ ಶಾಲೆ ನಿರ್ಮಿಸಲು, ವಾಲ್ಮೀಕಿ ಸಂಶೋಧನಾ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಶೀಘ್ರದಲ್ಲೇ ಅನುದಾನವನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಸಮಾಜಕ್ಕೆ ಕೊಡುಗೆ ಕುರಿತು ವಿಶೇಷ ಉಪನ್ಯಾಸವನ್ನು ತಿಮ್ಮೇಶ ಪ್ರಭು ಅವರು ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದ ವರೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪಾಂಡುರಂಗ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ , ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ದೇವನಹಳ್ಳಿ ತಾಲೂಕು ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…