ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ಮರುಹಂಚಿಕೆ ಮಾಡಲಾಗುವುದು- ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಒದಗಿಸಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಮರುಹಂಚಿಕೆ ಮಾಡಲಾಗುವುದು. ಜೊತೆಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಉಂಟಾಗುತ್ತಿರುವ ಗೊಂದಲವನ್ನು ನಿವಾರಣೆ ಮಾಡಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿದ್ದು ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಈ ವೇಳೆ ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಖ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago