ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ, ಹೆಂಡ ಹಂಚಲು ಬಳಕೆಯಾಗಿದೆ ಎಂಬ ಆಘಾತಕಾರಿ ವಿಷಯ ಇ.ಡಿ. ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನಿಗಮದ ಹಣವನ್ನ ಮಾಜಿ ಸಚಿವ @BNagendraINC ಅವರು ತಮ್ಮ ಮನೆಯ ಕರೆಂಟ್ ಬಿಲ್ ಕಟ್ಟಲು, ವಾಹನಗಳಿಗೆ ಡೀಸೆಲ್ ತುಂಬಿಸಲು, ಕುಟುಂಬ ಸದಸ್ಯರಿಗೆ ವಿಮಾನ ಟಿಕೆಟ್ ಖರೀದಿಸಲು, ಮನೆ ಕೆಲಸದವರಿಗೆ ಸಂಬಳ ನೀಡಲೂ ಸಹ ಬಳಸಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದ್ದು, ಇವುಗಳಿಗೆ ಸಾಕ್ಷಿ ಸಹ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ದಲಿತರಿಗೆ ಸೇರಬೇಕಾದ ಹಣದಲ್ಲಿ ಇಷ್ಟು ದೊಡ್ಡ ಭ್ರಷ್ಟಚಾರ ನಡೆದಿರುವಾಗ ‘ಆತ್ಮಸಾಕ್ಷಿ’ ಇರುವ ಯಾವ ಮುಖ್ಯಮಂತ್ರಿಯೂ ಒಂದು ಕ್ಷಣವೂ ತಮ್ಮ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.
ಆದರೆ ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ತಿಳಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…