Categories: ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು- ಸಿಎಂ‌ ಸಿಎಂ ಸಿದ್ದರಾಮಯ್ಯ

ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು, ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ವಿದ್ಯೆ ಸಿದ್ಧಿಸುತ್ತದೆ ಎನ್ನುವುದನ್ನು ನಮ್ಮಲ್ಲಿ ಬಿತ್ತಿದ್ದಾರೆ. ಇದು ತಪ್ಪು ಎಂದು ತಿಳಿಸಿದರು.

ಚನ್ನಪ್ಪಯ್ಯ ಎನ್ನುವ ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎಂದು ನನ್ನಪ್ಪ ಹೇಳುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದರು.

ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮ ಗಾಂಧಿಯವರು ಹೇಳುವ ರಾಮರಾಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಳು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬೋಕೆ ಹೋಗಬೇಡಿ. ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದರು ಎಂದು ಹೇಳಿದರು.

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಹೆಚ್.ಡಿ.ಕೋಟೆಯಲ್ಲಿ ₹443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದ್ದೇನೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ ₹443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಇದನ್ನು ದೇಶದ ಬೇರೆ ಯಾವ ಸರ್ಕಾರವೂ ಕೊಟ್ಟಿರಲಿಲ್ಲ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು. ಪರಿಶಿಷ್ಠ ವರ್ಗದ ಮಂತ್ರಿಯಾಗಿದ್ದ ನಾಗೇಂದ್ರ ಅವರ ಮೇಲೂ ಸುಳ್ಳು ಕೇಸು ಹಾಕಿದ್ದರು. ಈಗ ನಾಗೇಂದ್ರ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಒಳ್ಳೆ ತೀರ್ಮಾನ ಮಾಡುತ್ತೇನೆ ಎಂದರು.

ನಮ್ಮ ಗ್ಯಾರಂಟಿಗಳಿಂದ ಅನುಕೂಲ ಪಡೆದವರು ನಮಗೆ ಮತ ಕೊಡಲಿ, ಬಿಡಲಿ ಆದರೆ ನಾವು ಬಡವರ ಕಲ್ಯಾಣಕ್ಕೆ ಕೆಲಸ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಬಡವರ ಪರ ಕೆಲಸ ಮಾಡುವುದು ನಮ್ಮ ಬದ್ಧತೆ ಎಂದು ಹೇಳಿದರು.

ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು. ಈ ಸಮುದಾಯದ ಜೊತೆ ನಮ್ಮ ಸರ್ಕಾರ ಇರಲಿದೆ ಎಂದರು.

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

1 hour ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

9 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

11 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

22 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago