Categories: ಕೋಲಾರ

ವಾಲ್ಮೀಕಿ ಜಾತ್ರಾ ಮಹೋತ್ಸವದ ಯಶಸ್ವಿಗೆ ನಗರದಲ್ಲಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕೋಲಾರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜೇನಹಳ್ಳಿಯಲ್ಲಿ ನಡೆಯಲಿರುವ 7 ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಗರದ ಕೋಟೆಯ ವಾಲ್ಮೀಕಿ ಭವನದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಾಯಿತು.

ಮುಂದಿನ ವರ್ಷ ಫೆಬ್ರುವರಿ ತಿಂಗಳಿನ 8 ಮತ್ತು 9 ರಂದು ವಾಲ್ಮೀಕಿ ಗುರುಪೀಠದಲ್ಲಿ ಜಾತ್ರೆ ಮಹೋತ್ಸವ ನಡೆಯಲಿದ್ದು ಜಿಲ್ಲೆಯಾದ್ಯಂತ ಸಮುದಾಯದವರು ಪಕ್ಷ, ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಬೇಕು ಇದಕ್ಕೆ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಎಂ ಬಾಲಗೋವಿಂದ್, ಹಾಗೂ ಬೈರಂಡಹಳ್ಳಿ ನಾಗೇಶ್ ಅವರನ್ನು ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು

ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಅಂಬರೀಷ್, ಮುಖಂಡರಾದ ಮಾಲೂರು ಎನ್ ವೆಂಕಟರಾಮ್ , ಕುಡುವನಹಳ್ಳಿ ಆನಂದ್, ನರೇಶ್, ನರಸಿಂಹಪ್ಪ, ಅಶ್ವಥ್, ಕೆ.ಆನಂದ್ ಕುಮಾರ್, ಕಲ್ವಮಂಜಲಿ ರವಿ, ಕಲ್ಲಂಡೂರು ನಾರಾಯಣಸ್ವಾಮಿ, ಬೆಳ್ಳೂರು ತಿರುಮಲೇಶ್, ದಿಂಬ ಚಾಮನಹಳ್ಳಿ ರಾಮಪ್ಪ, ಶಂಕರಪ್ಪ, ಮೇಡಹಾಳ ಮಂಜುನಾಥ್, ನಿವೃತ್ತಿ ಶಿಕ್ಷಕ ನರಸಿಂಹಯ್ಯ, ಐತಾರಸಹಳ್ಳಿ ಶ್ರೀನಿವಾಸ್, ಕೋಟೆ ಮಂಜುಳ ಶ್ರೀನಿವಾಸ್, ಮಧು, ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…

38 minutes ago

ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…

2 hours ago

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…

3 hours ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

6 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

8 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

9 hours ago