ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ ಅವರ ಹುಟ್ಟುಹಬ್ಬದ ಪ್ರಯುಕ್ತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಹೀಗೆ ಸಾಮಾಜಿಕ ಕೈಂಕರ್ಯಗಳಲ್ಲಿ ಹೆಚ್ಚು ಹೆಚ್ಚು ತೊಡಗಿಕೊಂಡು ಸಮಾಜವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಶುಭ ಹಾರೈಸಿದರು.
ಈ ವೇಳೆ ವಾಲ್ಮೀಕಿ ನಾಯಕರು, ಮುಖಂಡರು ಸೇರಿದಂತೆ ಇತರರು ಕೆ.ಸುಬ್ರಮಣಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿ ಅಭಿನಂದಿಸಿದರು.
ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ.