ಕೋಲಾರ: ನಗರದಲ್ಲಿನ ವಾಲ್ಮೀಕಿ ಸಮುದಾಯ ಭವನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕನು ಒತ್ತುವರಿ ಮಾಡಿಕೊಂಡಿದ್ದು ಅದನ್ನು ತೆರವುಗೊಳಿಸಬೇಕಾದ ಜಿಲ್ಲಾಡಳಿತವು ಸಮುದಾಯದ ಕೆಲವು ಮುಖಂಡರ ಪ್ರಭಾವದಿಂದ ಕಾಂಪೌಂಡ್ ಗೋಡೆ ಕಟ್ಟಲು ಮುಂದಾಗಿದ್ದು ಕಾಮಗಾರಿ ನಿಲ್ಲಿಸದೇ ಹೋದರೆ ಮುಂದೆ ಉ್ರಗವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ವಾಲ್ಮೀಕಿ ಮಾಹಾಸಭಾದ ತಾಲೂಕು ಅಧ್ಯಕ್ಷ ಕೆ.ಆನಂದ್ ಕುಮಾರ್ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯ ಭವನಕ್ಕೆ ಸುಮಾರು 31 ಗುಂಟೆ ಜಾಗವನ್ನು ನಿಗದಿಪಡಿಸಲಾಗಿದೆ ಭವನದ ಪಕ್ಕದಲ್ಲಿ ಖಾಸಗಿ ಕಲ್ಯಾಣ ಮಂಟಪದ ಮಾಲೀಕನು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಿಂದೆ ಜಿಲ್ಲಾಧಿಕಾರಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಸಹ ಒತ್ತುವರಿ ತೆರೆವಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮವಾಗಲ್ಲ ಇದಕ್ಕೆ ಸಮುದಾಯದ ಕೆಲವು ಪ್ರಭಾವಿ ವ್ಯಕ್ತಿಗಳು ನೇರವಾಗಿ ಶಾಮೀಲಾಗಿದ್ದಾರೆ ಎಂದು ದೂರಿದರು.
ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಗಳು ಪೂರ್ಣಗೊಂಡಿಲ್ಲದಿಂದ್ದರೂ ಶಾಸಕರು ಎಂಎಲ್ಸಿಗಳ ಒತ್ತಡದಿಂದ ಭವನವನ್ನು ಉದ್ವಾಟನೆ ಮಾಡಲಾಗಿದೆ ಭವನದ ಜಾಗದ ಸಮಸ್ಯೆಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ಇದ್ದರೂ ಕಾಂಪೌಂಡ್ ಗೋಡೆಯ ಕಾಮಗಾರಿ ಪ್ರಾರಂಭಿಸಿದ್ದಾರೆ ಕೂಡಲೇ ಜಾಗದ ಸಮಸ್ಯೆ ಇತ್ಯರ್ಥವಾಗುವ ತನಕ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮುಖಂಡ ನರಸಿಂಹಯ್ಯ ಮಾತನಾಡಿ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರು ಸಹ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ಮಾಡಿ ಕಲ್ಯಾಣ ಮಂಟಪದ ಮಾಲೀಕನಿಗೆ ನೋಟೀಸ್ ನೀಡಿದ್ದರು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ನೀಡಿದ್ದರು ಯಾವುದೇ ತೆರವು ಮಾಡದೇ ಏಕಾಏಕಿ ಕಾಂಪೌಂಡ್ ಗೋಡೆ ಕಟ್ಟಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ರೋಣೂರು ಕೃಷ್ಣಪ್ಪ, ಮುನಿಯಪ್ಪ, ಶ್ಯಾಮ್ ನಾಯಕ್, ಮುನೇಯ್ಯ, ಅಶ್ವಥ್, ಗಿರೀಶ್ ಮುಂತಾದವರು ಇದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…