ಹೊಸಕೋಟೆ: ಚಿಂತಾಮಣಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಗರಸಭೆ ಸದಸ್ಯ ಮುರಳಿ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಕೂಡಲೇ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಾಲ್ಮೀಕಿ ನಾಯಕ ಯುವಪಡೆ ಸಂಘಟನೆ ರಾಜ್ಯಾಧ್ಯಕ್ಷ ಸುಬ್ರಮಣಿ ಹೇಳಿದರು.
ರಾಜ್ಯ ವಾಲ್ಮೀಕಿ ನಾಯಕ ಯುವ ಪಡೆ, ವಾಲ್ಮೀಕಿ ನಾಯಕ ಗಿರಿಜನ ಯುವ ಸಂಘ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಸಂಘದ ವತಿಯಿಂದ ನಗರದ ತಾಲೂಕು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಚಿಂತಾಮಣಿ ನಗರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಜನ ಪ್ರತಿನಿಧಿ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಮುರಳಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ವಾಲ್ಮೀಕಿ ಸಮುದಾಯದ ನಾಯಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ನಾವು ಖಂಡಿಸುತ್ತೇವೆ. ಅದಲ್ಲದೇ ಆರೋಪಿಗಳನ್ನು ಪತ್ತೆ ಹಚ್ಚಿ ಸದ್ಯದಲ್ಲಿಯೇ ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವಾಲ್ಮೀಕಿ ನಾಯಕ ಗಿರಿಜನ ಸಂಘದ ಜಿಲ್ಲಾಧ್ಯಕ್ಷ ಕ್ಷಬನಹಳ್ಳಿ ರಮೇಶ್ ಮಾತನಾಡಿ, ಚಿಂತಾಮಣಿ ನಗರದಲ್ಲಿ ನಗರಸಭೆ ಸದಸ್ಯ ಮುರಳಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಅಕ್ಟೋಬರ್ 18 ರಂದು ಚಿಂತಾಮಣಿ ಬಂದ್‌ಗೆ ಕರೆ ನೀಡಲಾಗಿದೆ. ನಮ್ಮ ವಾಲ್ಮೀಕಿ ಸಮುದಾಯದ ಎಲ್ಲಾ ಸಂಘಟನೆಗಳು ಕೂಡ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಚಿಂತಾಮಣಿಗೆ ತೆರಳಿ ಪ್ರತಿಭಟನೆ ನಡೆಸುತ್ತೇವೆ. ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದರು.
ಈ ವೇಳೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಂಘದ ರಾಜ್ಯಾಧ್ಯಕ್ಷ ಬೆಳ್ಳೂರು ಆಂಜಿನಪ್ಪ, ವಾಲ್ಮೀಕಿ ನಾಯಕ ಗಿರಿಜನ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೊಟ್ಟಿಪುರ ಶ್ರೀನಿವಾಸ್, ಹಿರಿಯ ಮುಖಂಡ ತಾವಟಹಳ್ಳಿ ಮುನಿಯಪ್ಪ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…