Categories: ಕೋಲಾರ

ವಾಲ್ಮೀಕಿ ಸಮುದಾಯ ಭವನಗಳ ನಿರ್ಮಾಣಕ್ಕೆ ತಡೆಯಾಜ್ಞೆ: ಅಕ್ರಮ ಖಾತೆಗಳನ್ನು ರದ್ದುಗೊಳಿಸುವಂತೆ ಮನವಿ

ಕೋಲಾರ: ಜಿಲ್ಲೆಯಾದ್ಯಂತ ಕೆಲವು ಕಡೆಗಳಲ್ಲಿ ವಾಲ್ಮೀಕಿ ಸಮುದಾಯ ಭನವಗಳ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ರದ್ದು ಮಾಡಿ ಭವನಗಳ ನಿರ್ಮಾಣಕ್ಕೆ ಆದೇಶ ನೀಡಬೇಕು ರಾಮಸಂದ್ರ ಗ್ರಾಮದಲ್ಲಿನ ಅಕ್ರಮ ಖಾತೆಗಳನ್ನು ರದ್ದು ಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ರಾಮಸಂದ್ರ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿ, ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತದೆ. ಆದರೆ, ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ತೆರವುಗೊಳಿಸಬೇಕು ಜೊತೆಗೆ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಜಮೀನು ಇರುವ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿಕೊಂಡು ಬಂದಿದ್ದಾರೆ. ಕೂಡಲೇ ಬಡವರಿಗೆ ರಕ್ಷಣೆ ಕೊಟ್ಟು ಅಕ್ರಮಗಳಿಗೆ ಕಾರಣವಾದ ರಾಜಸ್ವ ನಿರೀಕ್ಷಕ ಲೋಕೇಶ್ ಹಾಗೂ ಬೆಳ್ಳೂರು ಗ್ರಾಪಂ ಪಿಡಿಒಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ರಾಮಸಂದ್ರ ಗ್ರಾಮದಲ್ಲಿ ದೇವಸ್ಥಾನದ ಜಮೀನುಗಳನ್ನು ಸಹ ಅಕ್ರಮ ಖಾತೆಗಳನ್ನು ಮಾಡಿದ್ದಾರೆ. ಇಂತಹ ಅಕ್ರಮಗಳಲ್ಲಿ ಶಾಮೀಲು ಆಗಿರುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತು ದಿನಗಳ ಗಡುವು ನೀಡಲಾಗಿದೆ. ತಾವುಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಜನವರಿ 7 ರಿಂದ ತಹಶಿಲ್ದಾರ್ ಕಛೇರಿ ಮುಂದೆ ಗ್ರಾಮಸ್ಥರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಅನ್ಯಾಯವಾಗಿದ್ದರೆ ನಾನೇ ನೇರವಾಗಿ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡತ್ತೇನೆ. ಇಂದು ತಹಶಿಲ್ದಾರ್ ಗಳ ಸಭೆ ಕರೆಯಲಾಗಿದೆ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ತಪ್ಪಿತಸ್ಥರು ಯಾರೇ ಆಗಲಿ‌ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ವಾಲ್ಮೀಕಿ ಸಮುದಾಯ ಭವನಗಳಿಗೆ ತಡೆಯಾಜ್ಞೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಮಂಜುಳಾ ಶ್ರೀನಿವಾಸ್, ಗ್ರಾಮಸ್ಥರಾದ ರಾಜಣ್ಣ, ಅರುಣ್ ಕುಮಾರ್, ನಾರಾಯಣಪ್ಪ, ಮುನಿಯಪ್ಪ, ಹನುಮಂತಪ್ಪ, ವೆಂಕಟಸ್ವಾಮಿ, ನಾಗರಾಜ್, ಬಾಲಕೃಷ್ಣ, ಪ್ರವೀಣ್, ವಿಎನ್ಎಸ್ ವೆಂಕಟ್, ಹರೀಷ್, ಅರುಣ್ ಕುಮಾರ್, ಅಶ್ವಥ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

9 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

10 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

13 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

22 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago