ವಾಹನಗಳ ‘ಹಾರ್ನ್’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಲ್ಲ ವಾಹನಗಳ ಹಾರ್ನ್‌ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್, ಮೆಥನಾಲ್, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…