ವಾಹನಗಳ ‘ಹಾರ್ನ್‌’ನಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಭಾರತೀಯ ಸಂಗೀತ ವಾದ್ಯಗಳ ಶಬ್ದ ಬಳಕೆಗೆ ತೀರ್ಮಾನ- ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ

ವಾಹನಗಳ ‘ಹಾರ್ನ್‌’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಎಲ್ಲ ವಾಹನಗಳ ಹಾರ್ನ್‌ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್‌, ಮೆಥನಾಲ್‌, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

4 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

14 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago