ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದಿರುತ್ತಾರೆ. ಈ ಮೊಳೆಗಳು ವಾಹನಗಳ ಚಕ್ರಕ್ಕೆ ಚುಚ್ಚಿದರೆ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಭರ್ಜರಿ ವ್ಯಾಪಾರವಂತೆ…!?.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್ ರಸ್ತೆಯಲ್ಲಿ ಬಿದ್ದಿದ್ದ ಮೊಳೆಗಳನ್ನು ಆಯ್ದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.
ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದ ರಸ್ತೆಯಲ್ಲಿ ಲೋಹದ ಮೊಳೆಗಳನ್ನು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸಂಚಾರ ಪೊಲೀಸರು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ರಸ್ತೆಯಲ್ಲಿ ಎಸೆಯಲಾಗಿದ್ದ ಮೊಳೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಮೊಳೆ ಎಸೆಯುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಈ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಸೆದ ಲೋಹದ ಮೊಳೆಗಳನ್ನು ಆರಿಸುವುದನ್ನು ಇದು ತೋರಿಸುತ್ತದೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಲಾಗಿದೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…