ವಾಹನ ಸವಾರರ ಅನುಕೂಲ ಹಾಗೂ ಶಬ್ಧ ಮಾಲಿನ್ಯ ತಡೆಯಲು ರಾಜ್ಯದಲ್ಲಿ ಇನ್ಮುಂದೆ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಬ್ರೇಕ್ ಬಿದ್ದಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕ(ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ಧ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ, ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಎಲ್ಲಾ ಘಟಕಾಧಿಕಾರಿಗಳಿಗೆ ಸೂಚಿಸಲಾಗಿದೆ.
ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬುದರ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ. ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.
ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್‌ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ.
ಸೈರನ್‌ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…