ವಿಕಲಚೇತನರಿಗೆ ಉಚಿತ ಕಾನೂನು ನೆರವು- ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ

ಕಾನೂನು ಸೇವಾ ಪ್ರಾಧಿಕಾರಕ್ಕೆ ಸಬಂಧಪಟ್ಟಂತೆ ಎಲ್ಲಾ ವಿಕಲಚೇತನರಿಗೂ ಉಚಿತ ಕಾನೂನು‌ ನೆರವು ನೀಡಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಸೇನ ಬಾಗಡಿ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು

ರಾಷ್ಟ್ರೀಯ ಕಾನೂನು ಸೇವಾ ಅಧಿನಿಯಮ 1987 ಕಾಲಂ 12ರಡಿಯಲ್ಲಿ ಎಲ್ಲಾ ವಿಕಲಚೇತನರಿಗೂ ಉಚಿತ ಕಾನೂನು ಅರಿವು ನೆರವು ನೀಡಲಾಗುತ್ತದೆ. ದೈಹಿಕ ನ್ಯೂನತೆಯಿಂದ ಬಳಲುತ್ತಿದ್ದು ಕಛೇರಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೆ ಸಹಾಯವಾಣಿ 15100 ಕರೆ ಮಾಡಬಹುದು.ಸರ್ಕಾರಿ ಸೌಲಭ್ಯ ಪಡೆಯಲು ಕಚೇರಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೆ ಕಾನೂನು ಸೇವಾ ಸಮಿತಿಯಿಂದ ಅರೆಕಾಲಿಕ ನ್ಯಾಯಿಕ ಸ್ವಯಂ ಸೇವಕರು ಮನೆ ಬಾಗಿಲಿಗೆ ಬಂದು ನಿಮ್ಮ ‌ಅರ್ಜಿಗಳನ್ನು ಇಲಾಖೆಗೆ ಅರ್ಜಿ ಸಲ್ಲಿಸಿ ಕಾಲಕಾಲಕ್ಕೆ ಮಾಹಿತಿ ನೀಡುತ್ತಾರೆ.

ಕೇಂದ್ರ ಸರ್ಕಾರವು 2016ರಲ್ಲಿ ವಿಕಲಚೇತನರ ಹಕ್ಕುಗಳನ್ನು ಕಾಪಾಡಲು ಕಾನೂನನ್ನು ಜಾರಿಗೆ ತಂದಿದೆ. ಜನಸಾಮಾನ್ಯರಿಗೆ ಕಾಯಿದೆಯ ಬಗ್ಗೆ ತಿಳುವಳಿಕೆಯಿಲ್ಲದ ಕಾರಣ ಸಂಪೂರ್ಣವಾಗಿ ಅನುಷ್ಠಾನಕ್ಕೆ ಬಂದಿರುವುದಿಲ್ಲ.‌ಈ ಕಾಯಿದೆ ಪ್ರಕಾರ ಸರ್ಕಾರಿ ನೇಮಕಾತಿಗಳಲ್ಲಿ 4% ಮೀಸಲಾತಿ ನೀಡಬೇಕು. ಶಾಲೆಗಳಲ್ಲಿ 5% ಮೀಸಲಾತಿ ವಿಕಲ ಚೇತನರ ಮಕ್ಕಳಿಗೆ ನೀಡಬೇಕು.ಯಾವುದೇ ಸರ್ಕಾರಿ, ಖಾಸಗಿ ಕಟ್ಟಡಗಳ ಕಛೇರಿಗಳಲ್ಲಿ ವಿಕಲಚೇತನರಿಗೆ ವ್ಹೀಲ್ ಚೇರ್ ನೀಡಬೇಕಾಗುತ್ತದೆ. ಕಾನೂನು ಹಾಗೂ ಅದರ ಸದುಪಯೋಗದ ಕುರಿತು ವಿಸ್ತಾರವಾಗಿ ಮಾಹಿತಿ ಹಂಚಿಕೊಂಡರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು‌ ಮಾತನಾಡಿ ಈ ದಿನದ ವಿಕಲಚೇತನರ ದಿನಾಚರಣೆಯನ್ನು ವಿಶ್ವಸಂಸ್ಥೆಯು ಸಾಮಾಜಿಕ ಪ್ರಗತಿಯನ್ನು ಮುನ್ನೆಡಸಲು ಅಂಗವಿಕಲರನ್ನೊಳಗೊಂಡ ಸಮಾಜವನ್ನು ಪೋಷಿಸುವುದು ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲಾ ವಿಕಲಚೇನರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಕಾರ್ಯ ಕ್ರಮವನ್ನು ನಡೆಸಲಾಗುತ್ತದೆ. ಹಿರಿಯ ನಾಗರೀಕರಿಗೆ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಹಿರಿಯ ನಾಗರೀಕರಿಗೆ ವಿಕಲಚೇತನರಿಗೆ ಸಿಎಸ್ಆರ್ ವತಿಯಿಂದ ಅನುದಾನ ನೀಡಲಾಗುತ್ತಿದೆ.ಜಿಲ್ಲಾ ವ್ಯಾಪ್ತಿಯಲ್ಲಿ ಹಿರಿಯ ನಾಗರೀಕರಿಗೆ ವಿಶೇಷ ಶಿಬಿರಗಳನ್ನು ನಡೆಸಲಾಗಿದೆ. ವಿಶೇಷ ಚೇತನರು ತಮ್ಮಲ್ಲಿರುವ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಹೆಚ್ಚು ಹೆಚ್ಚು ಸರ್ಕಾರಿ ಹುದ್ದೆಗಳಲ್ಲಿ ಬರಲು ಪ್ರಯತ್ನಿಸಿ. ಸಹಾಯ ಮಾಡಲು ಜಿಲ್ಲಾಡಳಿತ ಸಿದ್ದವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಕಂಪ್ಯೂಟರ್ ನೀಡಲಾಯಿತು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮತ್ತು ವಿಕಲಚೇತನ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು ಹಾಗೂ ವಿಕಲಚೇತನ ಮಕ್ಕಳಿಗೆ ವಿವಿಧ ಕ್ರೀಡೆ ಮತ್ತು ಸಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಅದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ,ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ.ಮುನಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮುದ್ದಣ್ಣ. ಎಂ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ ಪಾಣಿ, ಜಿಲ್ಲಾ ನಿರೂಪಣ ಅಧಿಕಾರಿ ಅನಿತಾಲಕ್ಷ್ಮಿ, ತಾಲೂಕಿನ ಸಿಡಿಪಿಓಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳು ಹಾಗೂ ವಿಶೇಷಚೇತನರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

4 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

16 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

17 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

17 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

17 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

1 day ago