ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ದೇವನಹಳ್ಳಿ ತಾಲ್ಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರ 31 ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ವತಿಯಿಂದ ದೇವನಹಳ್ಳಿ ಕ್ಷೇತ್ರದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ದೈಹಿಕ ವಿಕಲಚೇತನ ಹೊಂದಿದ ಅರ್ಹ 09 ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾರ್ಮಿಕ ಕಲ್ಯಾಣ ಇಲಾಖೆ, ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ರವಿ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಕಾರ್ಮಿಕ ಅಧಿಕಾರಿ ನಾಗೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾಧಿಕಾರಿ ಜಗದೀಶ್, ಫಲಾನುಭವಿಗಳು ಉಪಸ್ಥಿತರಿದ್ದರು.