ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ

ಸಮಾಜದಲ್ಲಿ ವಿಶೇಷಚೇತನರನ್ನು ಮತ್ತು ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಜೊತೆಗೆ ಅವರನ್ನು ಗೌರವಯುತವಾಗಿ ಬದುಕು ನಡೆಸಲು ನಾವೆಲ್ಲರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ,
ಅಲಿಂಕೋ ಸಂಸ್ಥೆ ಸಹಯೋಗ ಆಯೋಜಿಸಿದ್ದ ಹಾಗೂ ಸಿಎಸ್ಆರ್ ಅನುದಾನದಡಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

ವಿಶೇಷಚೇತನರಲ್ಲಿ ತನ್ನದೇ ಅದ ವಿಶಿಷ್ಟ ಕಲೆ, ಶಕ್ತಿ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾನತೆ, ಗೌರವಯುತವಾಗಿ ನೋಡಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು. ಅಲಿಂಕೊ ಸಂಸ್ಥೆಯು ಉತ್ತಮ ಕೆಲಸ ಮಾಡಿದ್ದು ಅವರಿಗೆ ಧನ್ಯವಾದ.

149 ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸಿಎಸ್ಆರ್ ಅನುದಾನದಲ್ಲಿ 44.71ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮತ್ತು 161 ವಿಕಲಚೇತನರಿಗೆ ಅಡಿಪ್ ಯೋಜನೆಯಡಿ 12.55 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಹಾಗೂ 83 ಹಿರಿಯ ನಾಗರಿಕರಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 6.88 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮಾಡಲಾಗಿದ್ದು ಒಟ್ಟಾರೆ 393 ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ವೀಲ್ಚೇರ್, ಯಂತ್ರಚಾಲಿತ ವೀಲ್ ಚೇರ್, ಕ್ರಚರ್ಸ್, ಕ್ಯಾಲಿಪರ್ಸ್ ವಾಕರ್, ಶ್ರವಣ ಸಾಧನ ಹಾಗೂ ಇತರೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಯುಟಿಐ ಮತ್ತು ಐ.ಟಿ.ಎಸ್.ಎಲ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಬಾಸ್ಟಿನ್ ಪಾಲ್ ಹಾಗೂ ಬೆಂಗಳೂರು ವಿಭಾಗದ ಮ್ಯಾನೇಜರ್ ಮಹೇಶ್ವರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾ ಲಕ್ಷ್ಮೀ, ಅಲಿಂಕೋ ಸಂಸ್ಥೆಯ ಮ್ಯಾನೇಜರ್ ಎ.ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

44 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

19 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

24 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago