ವಿಕಲಚೇತನರ ಆರೈಕೆಗಾಗಿ 1000 ರೂ. ಗಳ ಪ್ರೋತ್ಸಾಹ ಧನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ ಮಾಹೆ(ತಿಂಗಳು) 1000 ರೂಪಾಯಿಗಳ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನರು ಅವರ ಆರೈಕೆದಾರರು ಅಗತ್ಯ ದಾಖಲಾತಿಗಳೊಂದಿಗೆ, ವಿಆರ್‌ಡಬ್ಲ್ಯೂ/ಯುಆರ್‌ಡಬ್ಲ್ಯೂ/ಎಂಆರ್ಡಬ್ಲ್ಯೂ/ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿಕಲಚೇತನರ ವಿಶಿಷ್ಟ ಗುರುತಿನ (ಯುಡಿಐಡಿ), ವಿಕಲಚೇತನರ ಆಧಾರ್ ಕಾರ್ಡ್, ಭಾವಚಿತ್ರ (ವಿಕಲಚೇತನರ ಮತ್ತು ಆರೈಕೆದಾರರ), ಆರೈಕೆದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ಆರೈಕೆದಾರರ ಆಧಾರ್ ಕಾರ್ಡ್.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!