ವಿಕಲಚೇತನರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡಿ: ಎಡಿಸಿ ಅಮರೇಶ್.ಹೆಚ್

ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇದ್ದೇ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪೋಷಿಸಿದರೆ ಸಾಧನೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಯ ಸಮಿತಿ ಅಧ್ಯಕ್ಷರಾದ ಅಮರೇಶ್.ಹೆಚ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ‌ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ‌ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯೂನತೆಗಳನ್ನು ಸಕಾಲದಲ್ಲಿ ಗುರುತಿಸಿದರೆ ಗುಣಪಡಿಸುವ ಸಾಧ್ಯತೆಯಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಕಲಚೇತನರ ಕುಂದು ಕೊರತೆ ಸಭೆಗಳನ್ನು ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಮೂಲಕ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಕ್ರಮವಹಿಸಲಾ ಗುತ್ತಿದೆ ಎಂದರು.

ಸರ್ಕಾರಿ ಸೌಲಭ್ಯಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿ ಕೊರತೆ ಇದೆ, ಅವರಿಗೆ ಸಂಪೂರ್ಣ ಮಾಹಿತಿ ತಿಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕಕರು ಶ್ರಮಿಸಬೇಕು ಎಂದು ಅವರು ಹೇಳಿದರು.

ವಿಕಲಚೇತನರ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವವರಿಗೆ ಅಭಿನಂದಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅನಿತಾಲಕ್ಷ್ಮೀ ಮಾತನಾಡಿ, ವಿಕಲಚೇತನರಲ್ಲಿ ಉತ್ಸಾಹವಿದೆ.

ವಿಕಲಚೇತನರನ್ನು ಸಮಾಜದ ಮುನ್ನೆಲೆಗೆ ತರುವ ಉದ್ದೇಶದಿಂದ ವಿಕಲಚೇತನರ ದಿನಾಚರಣೆ ಆರಂಭಿಸಲಾಯಿತು. ದೇಶದ ಅಭಿವೃದ್ಧಿಗೆ ವಿಕಲಚೇತನರ ಕೊಡುಗೆ ಇದೆ. ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ವಿಕಲಚೇತನರು ಸಾಧನೆ ಮಾಡುತ್ತಿದ್ದಾರೆ ಎಲ್ಲರೂ ಕೂಡ ತಮ್ಮ ವೈಫಲ್ಯ ಮರೆತು ನಿರಂತರ ಶ್ರಮದಿಂದ ಯಶಸ್ಸು ಗಳಿಸಿಕೊಳ್ಳಬಹುದೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರನ್ನು  ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆ, ವ್ಯಕ್ತಿಗಳನ್ನು   ಅಭಿನಂದಿಸಲಾಯಿತು.

ತಾಲ್ಲೂಕು ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿಕಲಚೇತನರಿಗೆ ಪ್ರಥಮ, ದ್ವಿತೀಯ, ತೃತೀಯ, ಬಹುಮಾನ ವಿತರಿಸಲಾಯಿತು. ವಿಕಲಚೇತನರಿಗೆ ಇರುವ ಸೌಲಭ್ಯಗಳ ಬಗ್ಗೆ ಹಾಗೂ ಕಾಯ್ದೆ ಕಾನೂನುಗಳ ಬಗ್ಗೆ  ಸಂಪನ್ಮೂಲ ವ್ಯಕ್ತಿಗಳ ಮೂಲಕ ಅರಿವು ಮೂಡಿಸಲಾಯಿತು. ಆರೋಗ್ಯ ಇಲಾಖೆ ವತಿಯಿಂದ ವಿಕಲಚೇತನರಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಮೂರ್ತಿ, ದೇವನಹಳ್ಳಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಿ.ಕೆ ನಾರಾಯಣ ಸ್ವಾಮಿ, ಹಿರಿಯ ತಜ್ಞೆ ಡಾ.ಗಾಯತ್ರಿ, ದೇವನಹಳ್ಳಿ ತಾಲ್ಲೂಕು ವಿಕಲಚೇತನರ ಅಧ್ಯಕ್ಷರಾದ ಸುರೇಶ್, ಆಲೂರು ದುದ್ದನಹಳ್ಳಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ ಸೇರಿದಂತೆ ಜಿಲ್ಲೆಯ ಎಲ್ಲಾ ವಿಕಲಚೇತನರು ಪ್ರಗತಿಪರ ಸಂಘಟನೆಗಳು, ಎಲ್ಲಾ ವಿವಿಧೋದ್ದೇಶ/ನಗರ/ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

47 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago