ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದೆ ಎಂದರು.

ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ರೂ. 1400/- ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000/- ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

9 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

9 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

14 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago