ವಿಕಲಚೇತನರ ಸೌಲಭ್ಯ ಕಲ್ಪಿಸಲು ಹಣ ಕೇಳುವವರ ವಿರುದ್ಧ ದೂರು ದಾಖಲಿಸಿ- ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನಗಳನ್ನು ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ವಿತರಿಸಲಾಗುತ್ತಿದ್ದು ಇಲಾಖೆಯಿಂದ ಯಾವುದೇ ರೀತಿಯ ಶುಲ್ಕವನ್ನು ನಿಗಧಿಪಡಿಸಿರುವುದಿಲ್ಲ, ಆದರೆ ಮಧ್ಯವರ್ತಿಗಳು ಸೌಲಭ್ಯ ದೊರಕಿಸಿಕೊಡುವುದಾಗಿ ಫಲಾನುಭವಿಗಳನ್ನು ನಂಬಿಸಿ ಹಣ ವಸೂಲಿ ಮಾಡುತ್ತಿರುವ ಜಾಲ ಕಂಡುಬಂದಿರುತ್ತದೆ.

ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನ ಯೋಜನೆಯು ಸೇರಿದಂತೆ ಇಲಾಖೆಯ ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿದ್ದು, ಈ ರೀತಿಯಲ್ಲಿ ಸೌಲಭ್ಯಕ್ಕಾಗಿ ಹಣ ಕೇಳುವ ಯಾವುದೇ ವ್ಯಕ್ತಿ ಅಥವಾ ಜಾಲ ತಮ್ಮ ಗಮನಕ್ಕೆ ಬಂದರೆ ಕೂಡಲೇ ಕಡ್ಡಾಯವಾಗಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಾಗೂ ಇಲಾಖೆಯ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ-080-29787441 ಗೆ  ಮಾಹಿತಿ ನೀಡಿ.

ಇಲಾಖಾ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *