ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನಗಳನ್ನು ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ವಿತರಿಸಲಾಗುತ್ತಿದ್ದು ಇಲಾಖೆಯಿಂದ ಯಾವುದೇ ರೀತಿಯ ಶುಲ್ಕವನ್ನು ನಿಗಧಿಪಡಿಸಿರುವುದಿಲ್ಲ, ಆದರೆ ಮಧ್ಯವರ್ತಿಗಳು ಸೌಲಭ್ಯ ದೊರಕಿಸಿಕೊಡುವುದಾಗಿ ಫಲಾನುಭವಿಗಳನ್ನು ನಂಬಿಸಿ ಹಣ ವಸೂಲಿ ಮಾಡುತ್ತಿರುವ ಜಾಲ ಕಂಡುಬಂದಿರುತ್ತದೆ.
ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನ ಯೋಜನೆಯು ಸೇರಿದಂತೆ ಇಲಾಖೆಯ ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿದ್ದು, ಈ ರೀತಿಯಲ್ಲಿ ಸೌಲಭ್ಯಕ್ಕಾಗಿ ಹಣ ಕೇಳುವ ಯಾವುದೇ ವ್ಯಕ್ತಿ ಅಥವಾ ಜಾಲ ತಮ್ಮ ಗಮನಕ್ಕೆ ಬಂದರೆ ಕೂಡಲೇ ಕಡ್ಡಾಯವಾಗಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಾಗೂ ಇಲಾಖೆಯ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ-080-29787441 ಗೆ ಮಾಹಿತಿ ನೀಡಿ.
ಇಲಾಖಾ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…