ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗಿರುತ್ತದೆ.
ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ. ಈ 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಲೈವ್ ಮಾಡಲಾಗಿದೆ.
2023-24ನೇ ಸಾಲಿಗೆ 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://sevasindhu.karnataka.gov.in/Sevasindhu/Department Services) ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಅರ್ಹ ವಿಕಲಚೇತನರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಮಾಹಿತಿ ಸಲಹಾ ಕೇಂದ್ರದ ದೂ.ಸಂ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
View Comments
Nirudyogi