ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗಿರುತ್ತದೆ. ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ. ಈ 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಲೈವ್ ಮಾಡಲಾಗಿದ್ದು, 2023-24ನೇ ಸಾಲಿಗೆ 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://sevasindhu.karnataka.gov.in/Sevasindhu/Department Services) ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ವಿಸ್ತರಿಸಲಾಗಿದೆ.
ಅರ್ಹ ವಿಕಲಚೇತನರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಮಾಹಿತಿ ಸಲಹಾ ಕೇಂದ್ರದ ದೂ.ಸಂ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…