ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದುಗೂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.
*ಸಮನ್ವಯ ಸಭೆ*
ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್ ಮಾತನಾಡಿದರು.
ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.
ರಾಜ್ಯದ ಕಾಂಗ್ರೆಸ್ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್, ರೈತರಿಗಾಗಿ ಫಸಲ್ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.
ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…