Categories: ಕೋಲಾರ

ವಿಕಸಿತ ಭಾರತ ಬಲಗೊಳ್ಳಲು ಬಿಜೆಪಿ ಪಕ್ಷ ಸಂಘಟನೆಗೆ ಒತ್ತು-ಡಾ.ನವೀನ್

ಕೋಲಾರ: ರೈತ ಮೋರ್ಚಾದ ಪದಾಧಿಕಾರಿಗಳು ತಮ್ಮ ಬೂತ್‌ಗಳಲ್ಲಿ ಹೆಚ್ಚಿನ ರೈತರನ್ನು ಬಿಜೆಪಿ ಸದಸ್ಯತ್ವ ಮಾಡಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬುಧವಾತ ರೈತ ಮೋರ್ಚಾ ಜಿಲ್ಲಾ ಕಾರ್ಯಾಗಾರ ಹಾಗೂ 2024 ರ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಸ್ವಾವಲಂಬಿ ಜೀವನ ನಡೆಸಲು ವಿಕಸಿತ ಭಾರತ ಪರಿಕಲ್ಪನೆಯಡಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಜನಸಾಮಾನ್ಯರಿಗೆ ತಲುಪಿ ಪಕ್ಷದ ಸದಸ್ಯರಾಗಿ ಸಂಘಟನೆಯ ಬೆಳೆವಣಿಗೆ ಒತ್ತು ನಿಒಡಬೇಕು ಎಂದು ತಿಳಿಸಿದರು.

ಭಾರತ ದೇಶದಲ್ಲಿ ಭಾರತೀಯರೇ ಪಕ್ಷವನ್ನು ಪ್ರಾರಂಭಿಸಿ ನೇತೃತ್ವ ವಹಿಸಿ ನಡೆಸುವ ಪಕ್ಷ ಬಿಜೆಪಿಯಾಗಿದೆ ವಿಶ್ವದ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ ಬಿಜೆಪಿ ಸದಸ್ಯತ್ವ ಅಭಿಯಾನ ಎಂದರೆ ಹಬ್ಬದ ವಾತಾವರಣ ಮೂಡಿಸುತ್ತದೆ ನಮ್ಮ ವಿಚಾರಧಾರೆ ಸಿದ್ಧಾಂತ ತಿಳಿಸುವ ಸಂದರ್ಭ ಬಂದಿದೆ ಪಕ್ಷವನ್ನು ವಿಸ್ತಾರ ಮಾಡಲು ಅವಕಾಶವು ಸೆ.1ರಿಂದ ಸದಸ್ಯತ್ವ ನೋಂದಣಿ ಶುರುವಾಗಿದೆ ಕೇಂದ್ರದ ಬಿಜೆಪಿ ‌ಸರ್ಕಾರ ಹಾಗೂ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ಹೇಳಬೇಕು ದೇಶದಲ್ಲಿ 10 ಕೋಟಿ ಸದಸ್ಯತ್ವ ಗುರಿ ಕೊಟ್ಟಿದ್ದಾರೆ. ರಾಜ್ಯ ರೈತ ಮೋರ್ಚಾಕ್ಕೆ 10 ಲಕ್ಷ ಜಿಲ್ಲೆಗೆ 25 ಸಾವಿರ ಗುರಿ ನೀಡಲಾಗಿದೆ. ಮಿಸ್ಡ್ ಕಾಲ್, ಆನ್‌ಲೈನ್, ಕ್ಯೂಆರ್ ಕೋಡ್, ಹಾಗೂ ನಮೋ ಆ್ಯಪ್ ಮೂಲಕ ಸದಸ್ಯತ್ವ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಸದಸ್ಯತ್ವದ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರ‌ ಮಾಡಬೇಕು ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ರಾಷ್ಟ್ರೀಯ ಅಧ್ಯಕ್ಷರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಪ್ರತಿಯೊಬ್ಬರೂ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಒಂದು ಲೋಕಸಭಾ ಕ್ಷೇತ್ರದಲ್ಲಿ 100 ಪ್ರಭಾವಿಗಳನ್ನು ಸದಸ್ಯರಾಗಿಸಬೇಕು ಎರಡು ತಿಂಗಳು ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಕಟ್ಟುವ ಕೆಲಸ‌ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ ಜಿಲ್ಲೆಯಿಂದ ರೈತ ಮೋರ್ಚಾದಿಂದ 25 ಸಾವಿರ ಸದಸ್ಯತ್ವದ ಗುರಿ ನೀಡಲಾಗಿದೆ ಜಿಲ್ಲೆಯ 9 ಮಂಡಲಗಳಲ್ಲಿ 7 ಮಂಡಲಗಳು ರಚನೆಯಾಗಿದೆ. ಇನ್ನು ಎರಡು ಮಂಡಲ ಆಗಬೇಕಿದೆ ಸದಸ್ಯರಾಗಲು ಮಿಸ್ಡ್ ಕಾಲ್ ಕೊಟ್ಟರೆ ಸಾಕು. ಆದರೆ ಸಕ್ರಿಯ ಸದಸ್ಯರಾಗಲು 100 ಜನರನ್ನು ಸದಸ್ಯರನ್ನಾಗಿ ಮಾಡಬೇಕು. ಈ ತಿಂಗಳ 25ರೊಳಗೆ ಮುಗಿಯಬೇಕು ಎಂದರು.

ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದಗೌಡ ಮಾತನಾಡಿ ದೇಶ ಕಾಪಾಡಬೇಕೆಂದರೆ‌ ಆಳುವ ಪಕ್ಷ ಸದೃಢವಾಗಿರಬೇಕು. ದೇಶವನ್ನು ಅಗ್ರಸ್ಥಾನಕ್ಕೆ‌ ಕೊಂಡೊಯ್ಯುವ ಗುರಿಯನ್ನು ಮೋದಿ‌ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ‌ಸದಸ್ಯತ್ವವನ್ನು ಹೆಚ್ಚಿಸಿ ಪಕ್ಷವನ್ನು ಬಲಪಡಿಸಬೇಕು ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರಿಗೆ ಏನೂ ಮಾಡಿಲ್ಲ ರೈತರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿದ್ದಾರೆ ಕೆಜಿಎಫ್ ಗೆ‌ ಬೆಂಗಳೂರಿನ ಕಸ ತಂದ‌ ಹಾಕಲು ಹೊರಟಿದ್ದಾರೆ ರೈತ ಪರವಾಗಿ ಬಿಜೆಪಿ ರೈತ ಮೋರ್ಚಾದಿಂದ ಮುತ್ತಿಗೆ, ಪ್ರತಿಭಟನೆ ‌ನಡೆಸಬೇಕಾಗಿದ್ದು ಕಾರ್ಯಕರ್ತರು ಸಂಘಟಿತರಾಗಬೇಕು ಎಂದರು.

ವೇದಿಕೆಯಲ್ಲಿ ಮಾಜಿ ಸಚಿವ ವರ್ತೂರ್ ಪ್ರಕಾಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಅಪ್ಪಿರಾಜು, ರೈತ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ, ಮುಖಂಡರಾದ ಹನುಮಪ್ಪ, ಓಹಿಲೇಶ್, ತಿಮ್ಮರಾಯಪ್ಪ, ಮುನಿವೆಂಕಟಪ್ಪ ಸೇರಿದಂತೆ ಮಂಡಲ ಅಧ್ಯಕ್ಷರು ಇದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

3 minutes ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

2 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

6 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

7 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

9 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

9 hours ago