ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಗಳನ್ನು ಒಂದುಗೂಡಿಸಿದ ಲೋಕ ಆದಾಲತ್‌: ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ ಜೋಡಿ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ದೂರವಾಗಿದ್ದ ಗಂಡ-ಹೆಂಡತಿಯನ್ನು ರಾಜೀ ಸಂಧಾನದ ಮೂಲಕ ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಅವರು ಒಂದು ಮಾಡಿದರು.

ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸುಮಾರು ವರ್ಷಗಳಿಂದ ನಡೆಯುತ್ತಿದ್ದ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡು ದೂರವಾಗಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಲಾಯಿತು.

ಇಬ್ಬರ ಮನಸ್ಸುನ್ನು ಬದಲಾಯಿಸಿ ನೂತನ ಜೀವನಕ್ಕೆ ಕಾಲಿಡುವಂತೆ ನ್ಯಾಯಾಧೀಶರು ಮನಮೋಲಿಸಿದರು. ನವ ವಧು- ವರರಂತೆ ಪರಸ್ಪರ ಹೂಮಾಲೆಗಳನ್ನು ಹಾಕಿಕೊಳ್ಳುವ ಮೂಲಕ ಸತಿ-ಪತಿ ಒಂದಾದರು.

ಒಂದಾದ ಜೋಡಿಗಳಿಗೆ ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮಿಸಿದ ಘಟನೆ ಕೋರ್ಟ್ ಆವರಣದಲ್ಲಿ ನಡೆದಿದೆ.

ಶಾಲಿನಿ – ಹರೀಶ್, ಸುರೇಶ್ – ಮೀನಾಕ್ಷಿ ಜೋಡಿಯು ದೊಡ್ಡಬಳ್ಳಾಪುರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಇದೀಗ ರಾಷ್ಟ್ರೀಯ ಲೋಕ ಆದಾಲತ್‌ ನಲ್ಲಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ. ಈ ಜೋಡಿ ಪುನಃ ತಮ್ಮ ದಾಂಪತ್ಯ ಜೀವನಕ್ಕೆ ಮರಳಿದ್ದಾರೆ.

ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗಳಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಇಂದು ನಡೆದ ಲೋಕ ಅದಾಲತ್ ನಲ್ಲಿ ಸುಮಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ‌. ಪ್ರತಿ ಮೂರು ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಆದಾಲತ್‌ ಹಮ್ಮಿಕೊಳ್ಳಲಾಗುತ್ತದೆ. ಈ‌ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು…

ಲೋಕ ಅದಾಲತ್ ನಿಂದ ನಾವು(ಗಂಡ-ಹೆಂಡತಿ) ಒಂದಾಗಿದ್ದೇವೆ. ಮುಂದೆ ಯಾವುದೇ ಮನಸ್ತಾಪಗಳು‌ ಇಲ್ಲದೇ ಸಂಸಾರ ನಡೆಸುಕೊಂಡು ಹೋಗುತ್ತೇವೆ‌. ನಮಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಂಡು, ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತೇವೆ. ನಮ್ಮನ್ನು ಮತ್ತೆ ಒಂದು‌ ಮಾಡಿದ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ವಕೀಲರಾದ ಎಂ.ಮೋಹನ್ ಕುಮಾರ್, ಎಂ. ಸುದರ್ಶನ್, ಎಂ.ಕೃಷ್ಣಮೂರ್ತಿ ಅವರಿಗೆ ಧನ್ಯವಾದಗಳು ಎಂದು ಶಾಲಿನಿ ಹರೀಶ್ ಅವರು ತಿಳಿಸಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

10 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

16 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago