ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ

ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವವು ಶ್ರೀ ಕ್ರೋಧಿನಾಮ ಸಂವತ್ಸರದ ಮಾಘ ಮಾಸದ ಬಹುಳ ಪ್ರತಿಪತ್ ಮಖಾ ನಕ್ಷತ್ರದ ಗುರುವಾರ ಮಧ್ಯಾಹ್ನ 2:10ಕ್ಕೆ ಸರಿಯಾಗಿ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಶ್ರೀಯವರ ಬ್ರಹ್ಮರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಜಾತ್ರೆಗೆ ತಾಲ್ಲೂಕಿನ ಭಕ್ತ ಮಹಾಶಯರೆಲ್ಲರೂ ಕುಟುಂಬ ಸಮೇತರಾಗಿ ಭಾಗವಹಿಸಿ, ತೀರ್ಥ ಪ್ರಸಾದಗಳನ್ನು ಸ್ವೀಕರಿಸಿ ಶ್ರೀಯವರ ಕೃಪಾಕಟಾಕ್ಷಕ್ಕೆ ಪಾತ್ರರಾದರು.

ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಈ ವೇಳೆ ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನಗರಸಭಾ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *